ಜಿಲ್ಲೆ

ಹೊಸ ಚೈತನ್ಯ ತುಂಬಿದ ಪ್ರಧಾನಿ ನರೇಂದ್ರ ಮೋದಿ...

ಶಾಸಕ ಯಶ್​ಪಾಲ್​ ಸುವರ್ಣ ಸಂತಸ

ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ

ಉಡುಪಿ: ಕೇಂದ್ರ ಬಿಜೆಪಿ ಸರ್ಕಾರ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ನೂತನ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಷ್ಟ್ರಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಸಂತಸ ವ್ಯಕ್ತಪಡಿಸಿದ್ದಾರೆ.

1995ರ ವಕ್ಫ್​ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ 1923ರ ಮುಸಲ್ಮಾನ್​ ವಕ್ಫ್​ ಕಾಯ್ದೆಯ ರದ್ದತಿ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದೆ. ಈ ಹೊಸ ಮಸೂದೆ ಮೂಲಕ ವಕ್ಫ್​ ಆಸ್ತಿಗಳ ಪಾರದರ್ಶಕ ನಿರ್ಹವಣೆ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ವಕ್ಫ್​ ಮಂಡಳಿಗಳ ದಕ್ಷತೆ ಹೆಚ್ಚಿಸಿ, ಆಸ್ತಿ-ಪಾಸ್ತಿಗಳ ನಿರ್ವಹಣೆಗೆ ತಂತ್ರಜ್ಞಾನ ಬಳಸಲು ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ.

ತಿದ್ದಪಡಿ ಮಸೂದೆಗೆ ಉಮ್ಮೀದ್​ ಬಿಲ್​ ಎಂದು ಹೆಸರಿಡಲು ನಿರ್ಧರಿಸಿರುವುದು ಅತ್ಯಂತ ಸಂತಸ ತಂದಿದೆ. ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷದ ಬಳಿಕ ದಿಟ್ಟ ಹೆಜ್ಜೆ ಇಟ್ಟಿರುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ ಷಾ ಹಾಗೂ ಮಸೂದೆ ಪರವಾಗಿ ಮತ ಚಲಾಯಿಸಿದ ಎಲ್ಲ ಸಂಸದರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.