ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರದಂದು ಯಾತ್ರಿ ಸೇವಾ ದಿವಸ್ ಆಚರಿಸಲಾಯಿತು.
ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಾಧಿಕಾರದ ಸೂಚನೆಯಂತೆ ಯಾತ್ರಿ ಸೇವಾ ದಿವಸ್ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಯಾಣಿಕರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಯಿತು. ರಸಪ್ರಶ್ನೆಗಳು ಮತ್ತು ಜಾಗೃತಿ ಅವಧಿಗಳಂತಹ ಕಾರ್ಯಕ್ರಮದಲ್ಲಿ ಪ್ರಯಾಣಿಕರು ಪಾಲ್ಗೊಂಡು, ಸಂತಸ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಪ್ರಯಾಣಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಏರ್ಪಡಿಸಲಾಗಿತ್ತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿನ ಸ್ವಚ್ಛತೆ, ಸೌಲಭ್ಯಗಳ ಬಗ್ಗೆ ಪ್ರಯಾಣಿಕರು ಅಭಿಪ್ರಾಯ ವ್ಯಕ್ತಪಡಿಸಿದರು. ನಿಲ್ದಾಣದ ಆವರಣದಲ್ಲಿ ವಿವಿಧ ತಳಿಯ ಸಸಿಗಳನ್ನು ನೆಡಲಾಯಿತು.
ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.