ಕೆಂಭಾವಿ: ಸುರಪುರ ಬಸ್ ಡಿಪೆÇ ಘಟಕದ ಅಧಿಕಾರಿಗಳ ನಿರ್ಲಕ್ಷೃದಿಂದ ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ರೊಚ್ಚಿಗೆದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಿರದಳ್ಳಿ ಕ್ರಾಸ್ ಹೆದ್ದಾರಿ ಮೇಲೆ ದಿಢೀರ್ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣಕ್ಕೆ ದಿನನಿತ್ಯ ವಲಯದ ಹಲವು ಗ್ರಾಮಗಳಿಂದ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು, ಸುರಪುರ ಘಟಕದಿಂದ ಸಮಯಕ್ಕೆ ಸರಿಯಾಗಿ ಬಸ್ ಓಡಿಸಬೇಕು ಎಂದು ಆಗ್ರಹಿಸಿ ಕಳೆದ ಒಂದು ವಾರದ ಹಿಂದಷ್ಟೆ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿತ್ತು. ಆದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷೃದಿಂದಾಗಿ ಮತ್ತೆ ಅದೇ ರಾಗ ಅದೇ ಹಾಡು ಎಂಬಂತೆ ವಿಳಂಬ ಮಾಡುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ನಾವು ಶಾಲಾ-ಕಾಲೇಜುಗಳಿಗೆ ಹೋಗಲು ಆಗದೆ ಶಿಕ್ಷಣದಿಂದ ವಂಚಿತರಾಗುತ್ತಿz್ದÉೀವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.
ಈ ಮೊದಲು ಪ್ರತಿಭಟನೆ ವೇಳೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಆದರೆ ಅದು ಯಾವುದು ಕೆಲಸ ಮಾಡಿಲ್ಲ. ಕೇವಲ ಅಧಿಕಾರಿಗಳು ಸುಳ್ಳು ಭರವಸೆ ನೀಡಿ ನಮ್ಮನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಗಲಾದರೂ ಸಮಯಕ್ಕೆ ಸರಿಯಾಗಿ ಬಸ್ ಓಡಿಸುವ ಮೂಲಕ ನಮ್ಮ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಂಚಾರ ನಿಯಂತ್ರಕ ಮಾನಪ್ಪ ಮಾಳಳ್ಳಿಕರ ವಿದ್ಯಾರ್ಥಿಗಳ ಜತೆ ಮಾತನಾಡಿ, ಶೀಘ್ರ ಕ್ರಮ ಕೈಗೊಳ್ಳುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.