ಯಲಬುರ್ಗಾ ತಹಸಿಲ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತ್ಯೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿದರು. ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಮುಖಂಡರಾದ ಸುರೇಶಗೌಡ ಶಿವನಗೌಡ, ದಾನನಗೌಡ ತೊಂಡಿಹಾಳ ಇನ್ನಿತರರಿದ್ದರು.  
ಜಿಲ್ಲೆ

ಬಸವ ಜಯಂತಿ ಆಚರಣೆ 30 ರಂದು

ಕುರುವತ್ತಿ ಶ್ರೀಕಾಂತಪ್ಪ

ಯಲಬುರ್ಗಾ: ಏ.30ರಂದು ಸಂಭ್ರಮ, ಸಡಗರದಿಂದ ಬಸವ ಜಯಂತಿ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.

ಪಟ್ಟಣದ ತಹಸಿಲ್ ಕಾರ್ಯಾಲಯದಲ್ಲಿ ಬಸವೇಶ್ವರರ ಜಯಂತ್ಯುತ್ಸವ ಕುರಿತು ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂದು ಬೆಳಗ್ಗೆ 9 ಗಂಟೆಗೆ ತಾಲೂಕು ಆಡಳಿತ ಹಾಗೂ ಜಯಂತ್ಯುತ್ಸವ ಸಮಿತಿಯಿಂದ ಸಾಂಸ್ಕೃತಿಕ ನಾಯಕ ಬಸವೇಶ್ವರ ಭಾವಚಿತ್ರ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮ ನಡೆಸಲಾಗುವುದು.

ಈ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸುವುದು, ಆಮಂತ್ರಣ ಪತ್ರಿಕೆ ಸಿದ್ಧಪಡಿಸಿ ಗಣ್ಯರಿಗೆ ಮುಂಚಿತವಾಗಿ ವಿತರಿಸುವುದು ಮತ್ತು ಉಪನ್ಯಾಸಕರನ್ನು ಕರೆತರುವುದು ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತಾಲೂಕಿನಾದ್ಯಂತ ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಏ.30 ರಂದು ಬಸವ ಜಯಂತಿಯನ್ನು ತಪ್ಪದೆ ಆಚರಣೆ ಮಾಡಬೇಕು ಎಂದರು.