ಯಲಬುರ್ಗಾದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ನೂತನ ಪ್ರಯೋಗಾಲಯ ಕೊಠಡಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಆರ್‌ಸಿಎಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಕೃಷ್ಣಾ ಹೊಟ್ಟಿ, ಟಿಎಚ್ ಅಮರೇಶ ಇದ್ದರು. 
ಜಿಲ್ಲೆ

ಮಾದರಿ ಆಸ್ಪತ್ರೆಯಾಗಿಸಲು ತೀರ್ಮಾನ

ಯಲಬುರ್ಗಾ: ಗ್ರಾಮೀಣರಿಗೆ ಆಧಾರವಾಗಿರುವ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶಾಸಕರು ಅಗತ್ಯ ಸೌಲಭ್ಯ ಒದಗಿಸುವಲ್ಲಿ ಬದ್ಧರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ನೂರು ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ನೂತನ ಪ್ರಯೋಗಾಲಯ ಕೊಠಡಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಇಲ್ಲಿ ಹೆಚ್ಚಾಗಿ ಬಡವೇ ಚಿಕಿತ್ಸೆ ಪಡೆಯುತ್ತಾರೆ. ಹೀಗಾಗಿ ಆಸ್ಪತ್ರೆಗೆ ಬೇಕಾದ ಅಗತ್ಯ ಸೌಕರ್ಯ ಕಲ್ಪಿಸವಲ್ಲಿ ಶಾಸಕ ರಾಯರಡ್ಡಿ ಬದ್ಧರಾಗಿದ್ದು, ಇದರ ಭಾಗವಾಗಿ ಪ್ರಯೋಗಾಲಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಆರೋಗ್ಯ ರಕ್ಷಾ ಸಮಿತಿ ಉಪಾಧ್ಯಕ್ಷ ಡಾ. ಶಿವನಗೌಡ ದಾನರಡ್ಡಿ ಮಾತನಾಡಿ, ಜಿಲ್ಲೆಯಲ್ಲಿಯೇ ಇದೊಂದು ಮಾದರಿ ಆಸ್ಪತ್ರೆಯನ್ನಾಗಿ ಮಾಡಲು ಶಾಸಕರು ತಿರ್ಮಾನಿಸಿದ್ದಾರೆ. ಈಗಾಗಲೇ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು, ಇನ್ನೂ ಅವಶ್ಯಕತೆ ಇರುವ ಸೌಕರ್ಯ ಒದಗಿಸಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಆರ್‌ಸಿಎಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಕೃಷ್ಣಾ ಹೊಟ್ಟಿ, ತಾಲೂಕು ಆರೋಗ್ಯಾಧಿಕಾರಿ ಅಮರೇಶ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಳ್ಳಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಶಿಧರ ಉಳ್ಳಾಗಡ್ಡಿ, ಮುನಾಫ್ ಮಂಕದಾರ್, ವಿ.ಎಸ್. ಶಿವಪ್ಪಯ್ಯನಮಠ, ಪ್ರಕಾಶ ಛಲವಾದಿ ಇತರರಿದ್ದರು.