ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ತುಮಕೂರು, ಬಳ್ಳಾರಿ ಹಾಗೂ ಕೋಲಾರ ಸೇರಿ ರಾಜ್ಯದ ಹಲವೆಡೆ ಗುರುವಾರ ಭರ್ಜರಿ ವರ್ಷಧಾರೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿದೆ. ಇದರಿಂದಾಗಿ, ಈಗಾಗಲೇ ಮುಂಗಾರು ಚುರುಕುಗೊಂಡ ಪರಿಣಾಮ ರಾಜ್ಯಾದ್ಯಂತ ಬಿರುಸಾಗಿ ಮಳೆಯಾಗುತ್ತಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 23ರಿಂದ ಜೂ 27ರವರೆಗೆ, ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮೂನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡಿನಲ್ಲೂ ಮುಂದಿನ ಐದು ದಿನ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಶೇ.67 ಮಳೆ ಕೊರತೆ: ಜೂ 1ರಿಂದ ಜೂ 22ರವರೆಗೆ ರಾಜ್ಯದಲ್ಲಿ ಶೇ.67 ಮಳೆ ಕುಂಠಿತವಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 137 ಮಿಮೀ ಮಳೆಯಾಗಬೇಕಿತ್ತು. ಆದರೆ, 45 ಮಿಮೀ ಮಳೆ ಬಿದ್ದಿದೆ. ದಕ್ಷಿಣ ಒಳನಾಡಲ್ಲಿ ಶೇ 23, ಉತ್ತರ ಒಳನಾಡಲ್ಲಿ ಶೇ.76, ಮಲೆನಾಡಲ್ಲಿ ಶೇ.79, ಕರಾವಳಿಯಲ್ಲಿ ಶೇ.75 ಕುಂಠಿತವಾಗಿದೆ. ದಾವಣಗೆರೆ, ಮೈಸೂರು, ವಿಜಯನಗರ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ,ಯಾದಗಿರಿ,ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ.
ಇದನ್ನೂ ಓದಿ: ಜೂನ್ 25ರಿಂದ ಕರಾವಳಿ,ಉತ್ತರ ಒಳನಾಡಲ್ಲಿ ಮಳೆ ಬಿರುಸು