ಕುಂದಾಪುರ: ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಶನಿವಾರ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರಾಮರಾಯ ಆಚಾರ್ಯ ವಹಿಸಿದ್ದರು. ಯೋಗ ಶಿಕ್ಷಕ ನಾರಾಯಣ ಯೋಗ ಹಾಗೂ ಯೋಗಾಸನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸಾಮೂಹಿಕವಾಗಿ ಯೋಗ ಪ್ರದರ್ಶನ ನೀಡಿದರು. ರೋವರ್ಸ್, ರೇಂಜರ್ಸ್ ಘಟಕದ ಸಂಚಾಲಕ ಕಾರ್ತಿಕ್ ಪೈ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ನಿರಂಜನ ಶರ್ಮ ಪ್ರಾರ್ಥಿಸಿದರು. ರಶ್ಮಿ ಸ್ವಾಗತಿಸಿದರು. ಸ್ವಯಂ ಸೇವಕರಾದ ವೈಷ್ಣವಿ ಮತ್ತು ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.