ಜಿಲ್ಲೆ

ಹುಬ್ಬಳ್ಳಿ ರೈಲ್ವೆ ವಿಭಾಗದಿಂದ ಯೋಗ ದಿನಾಚರಣೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಶುಕ್ರವಾರದಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ರೈಲ್ವೆ ಅಧಿಕಾರಿಗಳ ಕ್ಲಬ್​ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್​ನ ನಿವೇದಿತಾ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮಾಡಲಾಯಿತು.

ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ಹುಬ್ಬಳ್ಳಿ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ ಕುಮಾರ ವರ್ವ, ವರಿಷ್ಠ ವಿಭಾಗೀಯ ಸಿಬ್ಬಂದಿ ಅಧಿಕಾರಿ ಕೆ. ಆಸಿಫ್ ಹಫೀಜ್ ಹಾಗೂ ಇತರರು ಪಾಲ್ಗೊಂಡಿದ್ದರು.