ಜಿಲ್ಲೆ

ಮೂರ್ನಾಡುವಿನಲ್ಲಿ ಯೋಗ ದಿನಾಚರಣೆ

Mysuru - Desk - Ravikumar

ನಾಪೋಕ್ಲು: ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎನ್‌ಸಿಸಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಉಪನ್ಯಾಸಕಿ ರಶ್ಮಿ ಅವರು ವಿದ್ಯಾರ್ಥಿಗಳಿಗೆ ಯೋಗಾಸನ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ, ಚಕ್ರಾಸನ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಧಮಯಂತಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಶ್ಮಿ ಹಾಗೂ ಎನ್‌ಸಿಸಿ ಅಧಿಕಾರಿ ಕಾವೇರಪ್ಪ ಉಪಸ್ಥಿತರಿದ್ದರು.