ಮೈಸೂರು: ಮಹಾಮಾರಿ ಕರೊನಾ ವೈರಸ್ನಿಂದ ಆರ್ಥಿಕ ಪರಿಸ್ಥಿತಿ ಕುಸಿದಿರುವ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಮನನೊಂದು ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸರಸ್ವತಿಪುರಂ 14ನೇ ಕ್ರಾಸ್ ಬಳಿ ನಡೆದಿದೆ.
ರಿಯಲ್ ಎಸ್ಟೇಟ್ ಯುವ ಉದ್ಯಮಿ ರಾಘವೇಂದ್ರ(34) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋವಿಡ್-19 ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದರಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)