ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಭಾನುವಾರ ವಿದ್ಯುತ್ ತಗುಲಿ ಯುವಕ ಮಲ್ಲಿಕಾರ್ಜುನ ಸಂಜೀವ ಶಿವಾಪುರ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಬ್ಬಿನ ಬೆಳೆಗೆ ನೀರುಣಿಸಲು ಪಂಪ್ಸೆಟ್ ಪ್ರಾರಂಭಿಸಲು ಹೋದಾಗ ವಿದ್ಯುತ್ ತಗುಲಿ ಮತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಎಎಸ್ಐ ಡಿ.ಎಸ್. ಚಿಕ್ಯಾಕುಂಡಿ, ತನಿಖಾಸಹಾಯಕ ಶ್ರೀನಾಥ ಅವಟಿ ಭೇಟಿ ನೀಡಿ ಪರಿಶೀಲಿಸಿದರು.