ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಾಕಾರಿ ಡಾ.ಎಂ.ಡಿ.ಶಾಕೀರ್ ಮಾತನಾಡಿದರು. ಕಾಲೇಜು ಪ್ರಾಚಾರ್ಯೆ ಡಾ.ಪುಷ್ಪಾ, ಎನ್‌ಎಸ್‌ಎಸ್ ಯೋಜನಾಕಾರಿ ಡಾ.ಸಂತೋಷಕುಮಾರ, ಪ್ರಾಧ್ಯಾಪಕರಾದ ಡಾ.ಸುಗುಣಾ, ಐಸಿಟಿಸಿ ಮೇಲ್ವಿಚಾರಕ ಮಲ್ಲಯ್ಯ ಮಠಪತಿ ಇದ್ದರು. 
ಜಿಲ್ಲೆ

ಯುವ ಜನತೆ ಏಡ್ಸ್ ಕುರಿತು ತಿಳುವಳಿಕೆ ಹೊಂದಬೇಕು

ರಾಚಯ್ಯ ಸ್ವಾಮಿ

ರಾಯಚೂರು: ಸೋಂಕು ರೋಗಗಳಲ್ಲಿ ಎಚ್‌ಐವಿ ಏಮ್ಸ್ ಮರಣಾಂತಿಕವಾಗಿ ಪರಿಣಮಿಸಿದ್ದು, ಸಾರ್ವಜನಿಕರು ಅದರಲ್ಲೂ ಯುವಜನತೆ ಏಮ್ಸ್ ಸೋಂಕಿನ ಬಗ್ಗೆ ಮಾಹಿತಿ ಮತ್ತು ಜಾಗೃತಿ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಕಾರಿ ಡಾ.ಎಂ.ಡಿ.ಶಾಕೀರ್ ಹೇಳಿದರು.
ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಸೋಂಕು ಹರಡುವಿಕೆಯಿಂದ ವಿವಿಧ ಕಾಯಿಲೆಗಳು ತೀವ್ರವಾಗಿ ಹರಡುತ್ತಿದ್ದು, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.
ಎಚ್‌ಐವಿ ಏಡ್ಸ್ ನಿಯಂತ್ರಣಕ್ಕಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸೋಂಕು ಹರಡುವುದನ್ನು ತಡೆಯಲು ಜನರಲ್ಲಿ ತಿಳುವಳಿಕೆ ಮತ್ತು ಜಾಗೃತಿ ಮೂಡಿದಾಗ ಮಾತ್ರ ಸಾಧ್ಯವಾಗಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯೆ ಡಾ.ಪುಷ್ಪಾ ಮಾತನಾಡಿ, ವಿದ್ಯಾರ್ಥಿನಿಯರು ರೋಗಗಳಿಂದ ದೂರವಿರಲು ಹೆಚ್ಚಿನ ಜಾಗೃತಿ ವಹಿಸಬೇಕು. ಸ್ಪರ್ಧೆಗಳು ವಿಷಯದ ಆಳ ಅರಿಯುವಿಕೆಗೆ ಆಸ್ಪದ ಮಾಡಿಕೊಡುವುದರ ಜತೆಗೆ ವಿಚಾರ ಲಹರಿಯನ್ನು ವಿಸ್ತಾರಗೊಳಿಸುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಿತ್ತಿ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಯೋಜನಾಕಾರಿ ಡಾ.ಸಂತೋಷಕುಮಾರ, ಪ್ರಾಧ್ಯಾಪಕರಾದ ಡಾ.ಸುಗುಣಾ, ವೆಂಕಟೇಶ ರಾಥೋಡ್, ಐಸಿಟಿಸಿ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಶಾಂತಕುಮಾರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.