ಜಿಲ್ಲೆ

ಯುವತಿಗೆ ಡಿಕ್ಕಿ ಹೊಡೆದ ರೈಲು: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಕೆ.ಎನ್.ರಾಘವೇಂದ್ರ

ಮಂಡ್ಯ: ನಗರದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಾಲೂಕಿನ ಹೆಬ್ಬಕವಾಡಿ ಗ್ರಾಮದ ನಂಜೇಗೌಡ ಹಾಗೂ ಲಕ್ಷ್ಮೀ ದಂಪತಿ ಪುತ್ರಿ ವಿಜಯಲಕ್ಷ್ಮೀ(22) ಮೃತೆ. ಈಕೆ ಮೈಸೂರಿನಿಂದ-ಬೆಂಗಳೂರಿಗೆ ತೆರಳುತ್ತಿದ್ದ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಮಿಮ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.