ಶಿಗ್ಗಾಂವಿ: ಹೊಟ್ಟೆನೋವು ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಬೆಂಡಿಕೇರಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಅಶ್ವಿನಿ ಅರ್ಜುನಪ್ಪ ಬಾವಿಕಟ್ಟಿ (17) ಮೃತ ಯುವತಿ.
ಈಕೆ 2 ವರ್ಷದಿಂದ ಹೊಟ್ಟೆ ನೋವು ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಳು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡಿದ್ದಾಳೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.