ಸಾಂದರ್ಭಿಕ ಚಿತ್ರ 
ಜಿಲ್ಲೆ

ತಂಡದಿಂದ ಯುವಕನ ಮೇಲೆ ಹಲ್ಲೆ

Avinash R

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿ ಯುವಕನ ತಲೆಗೆ ಗಾಯವಾಗಿ ಸುಳ್ಯ ಆಸ್ಪತ್ರೆಗೆ ದಾಖಲಾದ ಟನೆ ಶನಿವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಳ್ಳಾರೆಯ ಆಶೀರ್​ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಅಜರುದ್ದೀನ್​ ಮತ್ತು ಜಮಾಲ್​ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಆಶೀರ್​ ಬೈಕ್​ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಲಾಗಿದೆ. ಗಾಯಾಳನ್ನು ಪೊಲೀಸರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.