ಜಿಲ್ಲೆ

ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ, ಬಿಡುಗಡೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ವಕ್ಫ್ ತಿದ್ದುಪಡಿ ಮಸೂದೆ- 2025 ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಜಮಾಯಿಸಿದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರ ಮೂಲಕ ರಾಷ್ಟçಪತಿಗೆ ಮನವಿ ರವಾನಿಸಿದರು.

ವಕ್ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಬದಲಾವಣೆಗಳು ಭಾರತೀಯ ಸಂವಿಧಾನದ ಆಶಯಗಳಾದ ಧಾರ್ಮಿಕ ಸ್ವಾತಂತ್ರ‍್ಯ ಮತ್ತು ಸಮಾನತೆಗೆ ವಿರುದ್ಧವಾಗಿವೆ. ವಕ್ ಮಂಡಳಿಯಲ್ಲಿ ಮುಸ್ಲಿಮೇತರರ ಸೇರ್ಪಡೆ ಮತ್ತು ವಕ್ ಆಸ್ತಿಗಳ ಮೇಲೆ ಸರ್ಕಾರಿ ನಿಯಂತ್ರಣ ಹೇರಲು ಮಾಡಿರುವ ಪ್ರಯತ್ನಗಳು, ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿಯಾಗುತ್ತವೆ. ಆದ್ದರಿಂದ ಮಸೂದೆಯನ್ನು ಹಿಂಪಡೆಯಬೇಕು. ಮುಸ್ಲಿಂ ಪ್ರತಿನಿಧಿಳೊಂದಿಗೆ ಸಮಾಲೋಚನೆ ಮಾಡದೆ ತಿದ್ದುಪಡಿ ಮಾಡಬಾರದು ಎಂದು ಮನವಿಯಲ್ಲಿ ಆಗ್ರಹಿಸಿದರು.

ಕಾರ್ಯಕರ್ತರು ನಂತರ ಕೋರ್ಟ್ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಲು ಮುಂದಾದರು. ಅದಕ್ಕೆ ಅನುಮತಿ ನೀಡದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಇತರರು ಪಾಲ್ಗೊಂಡಿದ್ದರು.