ಜಿಲ್ಲೆ

ಫೋಟೋಶೂಟ್​ ಹುಚ್ಚಿಗೆ ಬಲಿಯಾದ ಯುವಕ: ರೈಲ್ವೆ ಹಳಿ ಮೇಲೆ ನಿಂತು ಪ್ರಾಣ ಕಳೆದುಕೊಂಡ..

Webdesk - Ravikanth

ದಾವಣಗೆರೆ: ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಸಚಿನ್ (16) ಎಂಬಾತ ಸಾವಿಗೀಡಾದ ಯುವಕ.

ದಾವಣಗೆರೆಯ ಡಿಸಿಎಂ ಟೌನ್‌ಶಿಪ್‌ನ ಬಳಿ ಈ ದುರಂತ ಸಂಭವಿಸಿದೆ. ಫೋಟೋಶೂಟ್​ಗೆಂದು ಈ ಯುವಕ ಗೆಳೆಯರೊಂದಿಗೆ ಇಲ್ಲಿಗೆ ಬಂದಿದ್ದಾನೆ. ಒಳ್ಳೆಯ ಬ್ಯಾಕ್​ಗ್ರೌಂಡ್​​ ಸಿಗುತ್ತದೆ ಎಂದು ಹಳಿ ಮೇಲೆ ನಿಂತವ ಈಗ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ.

ರೈಲು ಬರುವಾಗ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಂಡರೆ ಚೆನ್ನಾಗಿ ಕಾಣಿಸುತ್ತದೆ ಎಂದು ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದಾನೆ. ರೈಲು ಪಕ್ಕದ ಹಳಿ ಮೇಲೆ ಸಾಗುತ್ತದೆ ಎಂದುಕೊಂಡಿದ್ದ. ಆದರೆ ರೈಲು ಸಾಗುವ ಹಳಿ ಮೇಲೇ ಆತ ನಿಂತಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.