ಜಿಲ್ಲೆ

ಯುವಕ ನೀರು ಪಾಲು

ಹಲಗೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಗುರುವಾರ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಬೆಂಗಳೂರಿನ ಲಿಂಗರಾಜಪುರದ ನಿವಾಸಿ ಅಭಿಷೇಕ್(21) ಮೃತರು. ಈತ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿ. ನಾಲ್ವರು ಗುರುವಾರ ಮಧ್ಯಾಹ್ನ ಕ್ಯಾಬ್‌ನಲ್ಲಿ ಮುತ್ತತ್ತಿಗೆ ಬಂದಿದ್ದು, ಈ ವೇಳೆ ಈಜಲು ಕಾವೇರಿ ನದಿಗೆ ಇಳಿದಾಗ ಅಭಿಷೇಕ್ ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದು, ಶುಕ್ರವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ನೀಡಲಾಯಿತು. ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.