ಹೆಬ್ರಿ: ವಿದ್ಯಾರ್ಥಿಗಳು ಹಿಂಜರಿಕೆ ಮತ್ತು ಭಯದಿಂದ ಹೊರಬಂದು ಮುಕ್ತವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ ಎಸ್. ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹೆಬ್ರಿ ಐಕ್ಯುಎಸಿ ಮತ್ತು ಎನ್‌ಎಸ್‌ಎಸ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಯುವ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವ ಸ್ಪಂದನ ಉಡುಪಿ ಯುವ ಪ್ರತಿನಿಧಿ ಭೀಮವ್ವ ವಕ್ರ, ಕಾಲೇಜು ವಿದ್ಯಾರ್ಥಿ ವೇದಿಕೆ ಸಂಚಾಲಕ ಡಾ.ಪ್ರವೀಣ್ ಕುಮಾರ್ ಎಸ್., ಎನ್‌ಎಸ್‌ಎಸ್ ನಾಯಕರಾದ ನಿಶಾಂತ್, ಅಮೃತಾ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಸಂಗೀತ ವಂದಿಸಿದರು.