ವಿಜಯಪುರ : ರಾಜ್ಯ ಸರ್ಕಾರದ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022&23 ಹಾಗೂ 2023&24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆ ವ್ಯಾಪ್ತಿಗೆ ಸೇರಲು ಜ. 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಝಳಕಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಅರ್ಹ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1,500 ಮಾಸಿಕ ರೂ., ಭತ್ಯೆ ಸಿಗಲಿದೆ. ಅರ್ಹ ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್
(ಜಠಿಠಿಟಠ:ಘಿಘಿಠಛಿಡಚಠಜ್ಞಿಛಜ್ಠಜಠ.ಚ್ಟ್ಞಚಠಿಚಚ.ಜಟಡ.ಜ್ಞಿ) ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್ನಲ್ಲಿ ತಮ್ಮ ದಾಖಲಾತಿ ಪರಿಶೀಲಿಸಿಕೊಳ್ಳಬಹುದು. ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ದಾಖಲಾತಿ ಆಗಿರದಿದ್ದರೆ ಅಭ್ಯರ್ಥಿಗಳನ್ನು ತಮ್ಮ ದಾಖಲಾತಿಗಳನ್ನು ತೆಗೆದುಕೊಂಡು ಸಾರ್ವಜನಿಕ ಶಿಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಎಸ್ಎಸ್ಎಲ್ಸಿ ಪ್ರಮಾಣ ಪತ್ರ, ಪದವಿ ಪೂರ್ವ ಶಿಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಪಿಯುಸಿ ಪ್ರಮಾಣ ಪತ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೆೇರಿಯಲ್ಲಿ ಪದವಿ ಮತ್ತು ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರಿ, ಖಾಸಗಿ ೇತ್ರದಲ್ಲಿ ಉದ್ಯೋಗ, ಸ್ವಯಂ ಉದ್ಯೋಗ ಮಾಡುತ್ತಿರುವ ಹಾಗೂ ಪದವಿ/ ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸೋಲಾಪುರ ರಸ್ತೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08352&250383ಕ್ಕೆ ಸಂಪರ್ಕಿಸುವಂತೆ ಜಿ.ಪಂ. ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.