ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಯುವಕರು ರಾಜ್ಯ ಬಿಜೆಪಿ ಉಪಾಧ್ಯಕ್ಷ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಎಸ್.ಬಾಲರಾಜು ಇದ್ದರು. 
ಜಿಲ್ಲೆ

ಬಿಜೆಪಿ ಸೇರಿದ ಯುವ ಸಮೂಹ

ಲೋಕೇಶ್ ಮನು. ಡಿ

ಕೊಳ್ಳೇಗಾಲ: ಕಾಂಗ್ರೆಸ್ ಸರ್ಕಾರದ ಶಾಸಕರನ್ನು ನೋಡಿದರೆ ಅಯ್ಯೋ ಎನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಟೀಕಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಇದರಲ್ಲಿ 80 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ ಎಂದು ಆರೋಪಿಸಿದರು.

ಸರ್ಕಾರ ಇಂತಹ ನಿಲುವು ನೋಡಿದರೆ ಕೊಳ್ಳೇಗಾಲ ಕ್ಷೇತ್ರ ಅಭಿವೃದ್ಧಿ ಹೇಗೆ ಸಾಧ್ಯವಾಗಲಿದೆ? ಎಂದು ಛೇಡಿಸಿದರು.

ಕಾಂಗ್ರೆಸ್ ಸೇರಿದಂತೆ ಇನ್ನಿತರ ಪಕ್ಷದಲ್ಲಿ ಗುರುತಿಸಿಕೊಂಡಿದ್ದ 30ಕ್ಕೂ ಹೆಚ್ಚು ಯುವಕರು ಬ್ರಹ್ಮ ನಿರಸನಗೊಂಡು ಬಿಜೆಪಿ ಪಕ್ಷಕ್ಕೆ ಸ್ವಯಂ ಪ್ರೇರಿತವಾಗಿ ಸೇರ್ಪಡೆ ಗೊಂಡಿದ್ದಾರೆ. ರಾಷಟ್ರೆ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ಗಟ್ಟಿಗೊಳ್ಳುತ್ತಿದೆ. ಇಂದಿನ ಪಕ್ಷ ಸೇರ್ಪಡೆ ಕಾರ್ಯಕ್ರಮದಿಂದ ನಮಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಎಸ್.ಬಾಲರಾಜ್ ಮಾತನಾಡಿ, ಬಿಜೆಪಿ ಸಿದ್ಧಾತ ಒಪ್ಪಿ ಯುವಕರು ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

ಕೊಳ್ಳೇಗಾಲ ಮೋಳೆ ಬಡಾವಣೆಯ ರಾಜೇಶ್, ನವೀನ, ರಾಜು, ದರ್ಶನ್, ಅಭಿ, ರಘು, ಕಿರಣ್, ರವಿ, ಮುಡಿಗುಂಡ ಬಡಾವಣೆಯ ರಾಜು, ಧನುಷ್, ಮಣಿ, ಪ್ರಜ್ಜು, ಸಂತೋಷ್, ಜಗ್ಗು, ರವಿ ಮತ್ತಿತರರು ಬಿಜೆಪಿ ಸೇರ್ಪಡೆಯಾದವರು.

ಎಸ್ಸಿ ಮೋರ್ಚಾ ತಾಲೂಕು ಘಟಕದ ಅಧ್ಯಕ್ಷ ಎಸ್.ಸಿದ್ದಪ್ಪಾಜಿ, ಮುಖಂಡರಾದ ಕೆ.ಕೆ.ಮೂರ್ತಿ, ಮುಳ್ಳೂರು ಪ್ರಭು, ಸೋಮಣ್ಣ ಉಪ್ಪಾರ್, ನಟರಾಜು ಮೋಳೆ, ಮಹದೇವಸ್ವಾಮಿ ಇದ್ದರು.