ಜಿಲ್ಲೆ

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಪ್ರಾಣ ಕಳೆದುಕೊಂಡ ಯುವಕ..

ತುಮಕೂರು: ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್​ (15) ಸಾವಿಗೀಡಾದ ಯುವಕ.

ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.