ಜಿಲ್ಲೆ

ತೋಟಕ್ಕೇ ಬಂದ ಹುಲಿಗೆ ಯುವಕ ಬಲಿ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಕೊಡಗು: ತೋಟಕ್ಕೆ ದಾಳಿ ಇಟ್ಟ ಹುಲಿಯೊಂದು ಯುವಕನ ಮೇಲೆರಗಿ ಸಾಯಿಸಿ ಹೋಗಿದ್ದು, ಆತನ ಶವ ಅಲ್ಲೇ ಇಟ್ಟುಕೊಂಡು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ.

ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಹುಲಿ ದಾಳಿ ನಡೆಸಿದ್ದು, ಕಾರ್ಮಿಕ ಯುವಕ 30 ವರ್ಷದ ಗಣೇಶ್ ಎಂಬಾತ ಸಾವಿಗೀಡಾಗಿದ್ದಾನೆ.

ಈ ಪರಿಸರದಲ್ಲಿ ಕಳೆದ ವರ್ಷ ಮೂವರು ಹುಲಿ ದಾಳಿಗೆ ಬಲಿಯಾಗಿದ್ದು, ಈ ಸಲ ಮತ್ತೊಬ್ಬರು ಸಾವಿಗೀಡಾದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವಕನ ಶವವನ್ನು ಸ್ಥಳದಲ್ಲೇ ಇರಿಸಿ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಎಸ್​ಪಿ ಅಯ್ಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯನ್ನು ಹಿಡಿಯಬೇಕು, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.