ಜಿಲ್ಲೆ

ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ವ್ಯರ್ಥವಾದ ಸಾರ್ವಜನಿಕರ ಪ್ರಯತ್ನ

ರಮೇಶ್​ ಕುಮಾರ್​​ ಬಿ ಎಡಮೋಳೆ

ಚಿಕ್ಕಬಳ್ಳಾಪುರ: ಮಚ್ಚಿನಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಗೌರಿ ಬಿದನೂರು ತಾಲ್ಲೂಕಿನ ಚಿಕ್ಕಕುರುಗೋಡು ಬಳಿ ನಡೆದಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಕುರುಬರಹಳ್ಳಿ ನಿವಾಸಿ ಮಂಜುನಾಥ್ (29) ಹತ್ಯೆಯಾದ ವ್ಯಕ್ತಿ. ಭಾನುವಾರ ಮುಂಜಾನೆ ಘಟನೆ ನಡೆದಿದೆ. ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಯುವಕನನ್ನು ರಸ್ತೆ ಬದಿ ಬಿಸಾಡಿ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಆಸ್ಪತ್ರೆಗೆ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವಿಗೀಡಾಗಿದ್ದಾನೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್​)