ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಸಿಂಧನೂರಿನಲ್ಲಿ ಯುವ ಜಾಥಾಕ್ಕೆ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಚಾಲನೆ ನೀಡಿದರು. ಶಾಸಕ ಆರ್.ಬಸನಗೌಡ ತುರ್ವಿಹಾಳ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ಒಕ್ಕೂಟದ ಅಧ್ಯಕ್ಷ ಜಿ.ನಂಜನಗೌಡ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡಬಸವರಾಜ ಇತರರಿದ್ದರು. 
ಜಿಲ್ಲೆ

ಯುವಜನತೆ ಆದರ್ಶ ಮೈಗೂಡಿಸಿಕೊಳ್ಳಸಲಿ

Kopala - Desk - Eraveni

ಸಿಂಧನೂರು: ಸನಾತನ ಧರ್ಮ, ಸಂಸ್ಕೃತಿ, ಪರಂಪರೆಯನ್ನು ವಿಶ್ವಕ್ಕೆ ಸಾರಿದ ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ನಗರದಲ್ಲಿ ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರ ಸಂಘಗಳ ಒಕ್ಕೂಟ ಹಾಗೂ ವಿವಿಧ ಕಾಲೇಜ್‌ಗಳ ಎನ್ನೆಸ್ಸೆಸ್ ಘಟಕಗಳಿಂದ ಆಯೋಜಿಸಿದ್ದ ಬೃಹತ್ ಯುವ ಜಾಥಾ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಜಗತ್ತಿನಲ್ಲೇ ಭಾರತ ಅತ್ಯಧಿಕ ಯುವ ಸಮೂಹ ಹೊಂದಿದೆ. ಯುವ ಶಕ್ತಿ ದೇಶದ ಅಭಿವೃದ್ಧಿಗೆ ಸರಿಯಾಗಿ ಬಳಕೆಯಾಗಬೇಕು. ಸ್ವಾಮಿ ವಿವೇಕಾನಂದರ ಚಿಂತನೆ, ವಿಚಾರಧಾರೆಗಳು ಯುವಕರು ತಿಳಿದುಕೊಳ್ಳಬೇಕು ಎಂದರು.

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಆರ್.ಬಸನಗೌಡ ತುರ್ವಿಹಾಳ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ಒಕ್ಕೂಟದ ಅಧ್ಯಕ್ಷ ಜಿ.ನಂಜನಗೌಡ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಿರ್ದೇಶಕರಾದ ಆರ್.ತಿಮ್ಮಯ್ಯ ಶೆಟ್ಟಿ, ನಲ್ಲಾ ವೆಂಕಟೇಶ್ವರಾವ ಇತರರಿದ್ದರು.

ನಗರಸಭೆ ಆವರಣದಿಂದ ಆರಂಭಗೊಂಡ ಜಾಥಾ ಅಶೋಕಭವನ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕನಕದಾಸ ವೃತ್ತ, ಗಾಂಧಿವೃತ್ತದ ಮೂಲಕ ಸತ್ಯಗಾರ್ಡನ್‌ವರೆಗೆ ನಡೆಯಿತು. ಯುವತಿಯರ ಡೊಳ್ಳು ಕುಣಿತ ಗಮನ ಸೆಳೆಯಿತು.