ಶಿವಮೊಗ್ಗ: ಬಿಜೆಪಿ ರಾಜಕೀದಲ್ಲಿ ಮಾತ್ರವಲ್ಲ, ಸಾಂಸ್ಕೃತಿಕ, ಕ್ರೀಡೆಯಲ್ಲೂ ಸಕ್ರಿಯವಾಗಿದೆ. ಬಿಜೆಪಿಗೆ ಅಧಿಕಾರ ಮಾತ್ರ ಮುಖ್ಯವಲ್ಲ. ಭವ್ಯ ಭಾರತದ ನಿರ್ಮಾಣಕ್ಕೆ ಯುವಶಕ್ತಿಯನ್ನು ಸಕ್ರಿಯಗೊಳಿಸುವುದು ಪಕ್ಷದ ಉದ್ದೇಶ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಪಿಇಎಸ್ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವಶಕ್ತಿಯ ಸದ್ಬಳಕೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ವಿಕಸಿತ ಭಾರತ ಹಾಗೂವಿಶ್ವಗುರು ಭಾರತ ನಿರ್ಮಾಣವಾಗಬೇಕು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಜಿಪಂ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರಿ ಮುಂತಾದವರು ಈ ಸಂದರ್ಭದಲ್ಲಿದ್ದರು.