ಜಿಲ್ಲೆ

ಕುಡಿದ ಮತ್ತಿನಲ್ಲಿ ಜಾಲಿರೈಡ್​ ಹೋಗಿದ್ದ ಮೂವರು ಯುವಕರ ದುರಂತ ಸಾವು..!

ಬೆಂಗಳೂರು: ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ಹೊಸಕೋಟೆ ಟೋಲ್​ಗೇಟ್ ಬಳಿ ನಡೆದಿದೆ.

ಮೃತ ಯುವಕರನ್ನು ರಾಜೇಶ್, ಲವನಿತ್ ಹಾಗೂ ಹರೀಶ್​ ಎಂದು ಗುರುತಿಸಲಾಗಿದೆ. ಕಂಠಪೂರ್ತಿ ಕುಡಿದಿದ್ದ ಮೂವರು ಒಂದೇ ಬೈಕಿನಲ್ಲಿ ತ್ರಿಬಲ್ ರೈಡ್ ಹೋಗಿದ್ದರು. ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಲ್ಮೆಟ್ ಹಾಕದೆಯಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರಿಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. (ಏಜೆನ್ಸೀಸ್​)