ಮಡಿಕೇರಿ:
ಕಾವೇರಿ ನದಿ ನೀರು ಹಂಚಿಕೆ.. ರಾಷ್ಟçಕ್ಕೆ ನುಸುಳಿ ಬರುವವರನ್ನು ತಡೆಯುವುದು, ಅಂತರರಾಷ್ಟಿçÃಯ ಸಂಬAಧ ಬಲಪಡಿಸುವುದು.. ಹೀಗೆ ಹಲವು ವಿಚಾರಗಳ ಕುರಿತು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ‘ಯುವ ಸಂಸತ್ ಸ್ಪರ್ಧೆ’ ಕಾರ್ಯಕ್ರಮದಲ್ಲಿ ವಿಷಯಗಳು ಪ್ರಸ್ತಾಪ ಆದವು.
ಭಾರತ ‘ಅಲಿಪ್ತ ನೀತಿ’ ಹೊಂದಿದ್ದು, ಸದಾ ಶಾಂತಿಯನ್ನು ಬಯಸುತ್ತದೆ. ಆ ನಿಟ್ಟಿನಲ್ಲಿ ಅಂತರರಾಷ್ಟಿçÃಯ ಸಂಬAಧ ಬಲಪಡಿಸಲು ಸದಾ ಸನ್ನದ್ಧವಾಗಿದೆ. ಇಸ್ರೇಲ್ ಮತ್ತು ಹಮಾಸ್, ರಷ್ಯಾ ಮತ್ತು ಉಕ್ರೇನ್ ಯುದ್ಧ ಕೊನೆಗೊಳಿಸಲು ಆ ರಾಷ್ಟçದ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ. ಆ ನಿಟ್ಟಿನಲ್ಲಿ ಭಾರತ ಸದಾ ಶಾಂತಿಯನ್ನು ಬಯಸುತ್ತದೆ ಎಂದು ಆಡಳಿತ ಪಕ್ಷದವರು ಪ್ರತಿಪಾದಿಸಿದರೆ, ನೋಟು ಅಮಾನ್ಯಕರಣ ಮಾಡಿದರೂ ಕಪ್ಪುಹಣ ಸಂಗ್ರಹ ಕಡಿಮೆಯಾಗಿಲ್ಲ. ಕಪ್ಪುಹಣ ಸಂಗ್ರಹ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಏಕರೂಪ ನಾಗರಿಕ ಸಂಹಿತೆ ರಾಷ್ಟçದ ಅಭಿವೃದ್ಧಿಗೆ ಪೂರಕವೇ ಎಂಬ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷದವರು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಆಡಳಿತ ಪಕ್ಷದವರು ರಾಷ್ಟçದ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಜತೆಗೆ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಏಕರೂಪ ಕಾನೂನುಗಳು ಜಾರಿಯಾಗಬೇಕು, ಸಮಾಜ ನಿಂತ ನೀರು ಆಗದೆ, ಹರಿಯುವ ನೀರು ಆಗಬೇಕು. ಆ ದಿಸೆಯಲ್ಲಿ ಬದಲಾವಣೆಯತ್ತ ಮುನ್ನೆಡೆಯಬೇಕು ಎನ್ನುವ ಅಭಿಪ್ರಾಯ ಆಡಳಿತ ಪಕ್ಷದವರಿಂದ ಕೇಳಿಬಂದಿತು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದಷ್ಟೇ ಮಹತ್ವ ವಿರೋಧ ಪಕ್ಷಕ್ಕೂ ಇದೆ. ಆಡಳಿತ ಪಕ್ಷ ತಪ್ಪು ಮಾಡಿದರೆ ಸರಿ ದಾರಿಗೆ ತರುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ ಎನ್ನುವುದೂ ಚರ್ಚೆಯಾಯಿತು.
ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನ ಶಕುಂತಲಾ ಸಭಾಧ್ಯಕ್ಷತೆ ವಹಿಸಿದ್ದರು. ತಿತಿಮತಿ ಸರ್ಕಾರಿ ಪಿಯು ಕಾಲೇಜಿನ ವಿನಯ ಕುಮಾರ, ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜಿನ ಅನ್ಸಿಕಾ, ಸೋಮವಾರಪೇಟೆಯ ಪಿಯು ಕಾಲೇಜಿನ ಅಮೃತ್, ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಪ್ರೀತಂ, ಮೂರ್ನಾಡು ಪಿಯು ಕಾಲೇಜಿನ ಅನನ್ಯ ದೇವೇಂದ್ರ ನಾಯಕ್, ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿನ ರಾಣಿ, ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಡಿಂಪಲ್, ಸೋಮವಾರಪೇಟೆ ಪಿಯು ಕಾಲೇಜಿನ ಇಮ್ರಾನ್, ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನ ಶ್ರೀನಿವಾಸ ಇತರರು ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸುಮಾರು ೯೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವ ಸಂಸತ್‌ನಲ್ಲಿ ಪಾಲ್ಗೊಂಡಿದ್ದರು.
ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಭಾರತ ವಿಶ್ವದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ಹೊಂದಿದ್ದು, ಕೇಂದ್ರದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ, ಹಾಗೆಯೇ ರಾಜ್ಯದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಒಳಗೊಂಡಿದ್ದು, ಪ್ರಜಾಪ್ರಭುತ್ವ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವಂತಾಗಬೇಕು. ‘ಜನ ಪ್ರತಿನಿಧಿಗಳು ಜನಸಾಮಾನ್ಯರ ಸೇವಕರಾಗಿದ್ದು, ತಮ್ಮ ಸ್ಥಳೀಯ ಸಮಸ್ಯೆಗಳ ಬಗ್ಗೆ ಸದನದಲ್ಲಿ ಬೆಳಕು ಚೆಲ್ಲಿ ಪರಿಣಾಮಕಾರಿ ಕಾರ್ಯಕ್ರಮ ರೂಪಿಸುವುದು ಪ್ರಜಾಪ್ರಭುತ್ವದ ಮೈಲುಗಲ್ಲಾಗಿದೆ. ಸುಗಮ ಹಾಗೂ ಸುಭದ್ರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ತೆಗೆದುಕೊಂಡು ಹೋಗುವಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.
ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ಪಿ.ಎಂ.ದೇವಕಿ ಮಾತನಾಡಿ ರಾಷ್ಟçದ ಅಭಿವೃದ್ಧಿಯಲ್ಲಿ ಪ್ರಜಾಪ್ರಭುತ್ವದ ಪಾತ್ರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ರಾಜಕೀಯ ವಿಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವö ಬೆಳೆಸಿಕೊಳ್ಳುವಂತಾಗಬೇಕು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ.ಮಂಜುಳಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ರಾಜ್ಯ ಮತ್ತು ರಾಷ್ಟçದ ಬಗ್ಗೆ ಅರಿವು ಇರಬೇಕು. ಕೃಷಿ, ಆರೋಗ್ಯ, ಶಿಕ್ಷಣ, ರಕ್ಷಣೆ, ವಿದೇಶಾಂಗ ವ್ಯವಹಾರ ಹೀಗೆ ಪ್ರತಿಯೊಂದರ ಬಗ್ಗೆಯೂ ಅರಿವು ಇರಬೇಕು. ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು, ಅವಕಾಶ ಕಲ್ಪಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಯುವ ಸಂಸತ್‌ನ್ನು ಆಯೋಜಿಸಲು ಸರ್ಕಾರ ಅವಕಾಶ ಮಾಡಿದೆ ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಉಪನ್ಯಾಸಕ ಚಿದಾನಂದ ಮಾತನಾಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಸಂತ ಮೈಕಲರ ಶಾಲೆಯ ಪ್ರಾಂಶುಪಾಲ ಸುಮಂತ್ ಕೆ.ಎಸ್., ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಉದಯ್ ಕುಮಾರ್ ಇತರರು ಇದ್ದರು.