ಉಡುಪಿ: ಮಲ್ಪೆಯ ಶಾಂತಿನಗರದಲ್ಲಿ ಮಂಗಳವಾರ ರಾಷ್ಟ್ರೀಯ ಮಟ್ಟದ ಯುವ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಪೆ ಶಾಂತಿನಗರ ನಿವಾಸಿ ವೀರಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡವರು. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್ ಬಾಕ್ಸಿಂಗ್ ಕ್ರೀಡೆಯಲ್ಲಿ ಅನೇಕ ಬಾರಿ ಭಾರತವನ್ನು ಪ್ರತಿನಿಧಿಸಿದ್ದರು. ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.