ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ನಿರಂತರಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಜು.23ರಂದು ಯುಟ್ಯೂಬ್ನಲ್ಲಿ ಲೈವ್ ವಿಡಿಯೋಗಳ ಬೋಧನೆ ಆರಂಭಿಸಲಿದೆ. ಪ್ರತಿ ದಿನ 45 ನಿಮಿಷಗಳ 4 ತರಗತಿಗಳನ್ನು ನಡೆಸಲಾಗುತ್ತಿದೆ.
ಪ್ರತಿದಿನ ಬೆಳಗ್ಗೆ 9ರಿಂದ 12 ಗಂಟೆವರೆಗೆ ಪಾಠಗಳನ್ನು http://www.youtube.com/c/dpuedkpucpa ಲಿಂಕ್ನಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಸ್ಮಾರ್ಟ್ಫೋನ್, ಲ್ಯಾಪ್ಟಾಪ್, ಇಂಟರ್ನೆಟ್ ಸೌಲಭ್ಯ ಇಲ್ಲದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಕಾಲೇಜು ಆರಂಭವಾದ ಮೇಲೆ ಮತ್ತೊಮ್ಮೆ ಪಾಠಗಳನ್ನು ಉಪನ್ಯಾಸಕರ ಮೂಲಕ ಬೋಧಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ತಿಳಿಸಿದ್ದಾರೆ.