ಯುಕ್ತಾ  
ಜಿಲ್ಲೆ

ಯುಕ್ತಾ ಹೊಳ್ಳ ರಾಜ್ಯಮಟ್ಟಕ್ಕೆ ಆಯ್ಕೆ

ಇಂದಿರಾ ಎನ್ ಕೆ

ಕುಂದಾಪುರ: ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಭಗತ್‌ಸಿಂಗ್ ಅವರ ಪಾತ್ರ ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.