ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿ ವಿಶ್ವ ಝೂನೋಸಿಸ್ ದಿನಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಬ್ಯಾನರ್ ಪ್ರದರ್ಶಿಸಲಾಯಿತು. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಸಿಇಒ ಡಾ.ಕೆ.ಎನ್.ಅನುರಾಧಾ, ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್‌ಕುಮಾರ್ ಇದ್ದರು. 
ಜಿಲ್ಲೆ

ಜಿಲ್ಲಾಡಳಿತ ಭವನದಲ್ಲಿ ವಿಶ್ವ ಝೂನೋಸಿಸ್ ದಿನಾಚರಣೆ

ಬೆಂಗಳೂರು ಗ್ರಾಮಾಂತರ: ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾದ ರೇಬಿಸ್ ರೋಗಕ್ಕೆ ಸರ್.ಲೂಯಿಸ್ ಪಾಶ್ಚರ್ ಅವರು ಮೊದಲು ಲಸಿಕೆಯನ್ನು ಯಶಸ್ವಿಯಾಗಿ ಪರಿಚಯಿಸಿದ ಸ್ಮರಣಾರ್ಥ ಈ ದಿನವನ್ನು ವಿಶ್ವ ವಿಶ್ವ ಝೂನೋಸಿಸ್ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಶನಿವಾರ ದೇವನಹಳ್ಳಿಯ ಜಿಲ್ಲಾಡಳಿತಭವನದ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಝೂನೋಸಿಸ್ ದಿನಾಚರಣೆಯಲ್ಲಿ ಮಾತನಾಡಿದರು. 1885 ರ ಜು. 6 ರಂದು ಲೂಯಿಸ್ ಪಾಶ್ಚರ್ ಅವರು ಈ ಲಸಿಕೆ ಪರಿಚಯಿದರು. ಈ ಲಸಿಕೆ ನೀಡಿದ್ದರಿಂದ ಮಾರಣಾಂತಿಕ ಕಾಯಿಲೆಯಿಂದ ರಕ್ಷಣೆ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು. ಇವರೊಬ್ಬ ರಸಾಯನಶಾಸ್ತ್ರಜ್ಞರಾಗಿದ್ದರು ಹಾಗೂ ಮತ್ತು ಸೂಕ್ಷ್ಮ ಜೀವಶಾಸ್ತ್ರಜ್ಞರಾಗಿದ್ದರು. ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಮೈಲಿಗಲ್ಲು ಸ್ಥಾಪಿಸಿದ್ದಾರೆ ಎಂದು ಸ್ಮರಿಸಿದರು. ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಝೂನೋಟಿಕ್ ಕಾಯಿಲೆಯಿಂದ ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ರಕ್ಷಣೆ ಮಾಡಿ ಎಂಬ ೋಷವಾಕ್ಯದ ಬ್ಯಾನರ್ ಪ್ರದರ್ಶಿಸಲಾಯಿತು.