ಜಿಲ್ಲೆ

ಜಿಲ್ಲಾ ಸಾಹಿತ್ಯ ಸಮ್ಮೇಳನ ಮುಂದಕ್ಕೆ

Mysuru

ಮೈಸೂರು: ತಿ.ನರಸೀಪುರದ ತಿರುಮಕೂಡಲಿನಲ್ಲಿ ಮಾರ್ಚ್ 28 ಮತ್ತು 29 ರಂದು ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್ ತಿಳಿಸಿದರು.


ಈ ಬಾರಿ ತಿ.ನರಸೀಪುರದ ತಿರುಮಕೂಡಲಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜಿಸಲು ಈ ಹಿಂದೆಯೇ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ನಿಗದಿತ ದಿನಾಂಕದಂದು ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ, ಶಾಲಾ-ಕಾಲೇಜಿನಲ್ಲಿ ಪರೀಕ್ಷೆಗಳಿರುವ ಕಾರಣ ಸಮ್ಮೇಳನ ಮುಂದೂಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪರಿಷತ್‌ನ ಪದಾಧಿಕಾರಿಗಳಾದ ಜಿ.ಪ್ರಕಾಶ್, ಕೆ.ಕೆಂಪಣ್ಣ, ಮಲ್ಲೇಶ್ ಇತರರಿದ್ದರು.