ಶನಿವಾರಸಂತೆ: ಇಲ್ಲಿನ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25ನೇ ಸಾಲಿನ ಹಿರಿಯ ಪ್ರಾಥಮಿಕ ಶಾಲಾ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಆ.29ರಂದು ಪ್ರಾರಂಭಗೊಳ್ಳಲಿದೆ. ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಉದ್ಘಾಟಿಸಲಿದ್ದಾರೆ.
ಸುಪ್ರಜ ಗುರುಕುಲ ಶಾಲೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶನಿವಾರಸಂತೆ ವರ್ತಕರ ಸಂಘದ ನಿರ್ದೇಶಕ ಶ್ರೀನಿವಾಸ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದು, ಸಂಘದ ಅಧ್ಯಕ್ಷ ಸರ್ದಾರ್ ಅಹಮ್ಮದ್, ಶನಿವಾರಸಂತೆ ಗ್ರಾಪಂ ಅಧ್ಯಕ್ಷೆ ಗೀತಾ ಹರೀಶ್, ವಲಯ ಕ್ರೀಡಾಕೂಟ ಸಮಿತಿ ಕಾರ್ಯದರ್ಶಿ ಕೆ.ಎಂ.ಸುನಂದಾ, ಸೋಮವಾರಪೇಟೆ ತಾಲೂಕು ಕ್ರೀಡಾಧಿಕಾರಿ ಸುಕುಮಾರಿ, ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ಸಿ.ಕೆ.ದಿನೇಶ್, ಶನಿವಾರಸಂತೆ ಗ್ರಾಪಂ ಸದಸ್ಯ ಎಸ್.ಎನ್.ರಘು, ದುಂಡಳ್ಳಿ ಗ್ರಾಪಂ ಸದಸ್ಯರಾದ ನಿತಿನ್, ಪೂರ್ಣಿಮಾ ಕಿರಣ್, ಮಹಾಂತೇಶ್, ಪ್ರಮುಖರಾದ ವಿನೂತ್ ಶಂಕರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಪ್ರಕಟಣೆ ತಿಳಿಸಿದೆ.