ಜಿಲ್ಲೆ

ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ: ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಪಾಂಡವಪುರ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಪರಿಶೀಲನೆ ನಡೆಸಿದರು.

ಲಕ್ಷ್ಮೀಸಾಗರ ಗ್ರಾಮದ ಪ್ರೌಢಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ಕಾಂಪೌಂಡ್, ಆಟದ ಮೈದಾನವನ್ನು ಪರಿಶೀಲಿಸಿದರು. ಅಂತೆಯೇ ಮಕ್ಕಳಿಗೆ ಅನುಕೂಲವಾಗುವ ಚಿತ್ರಗಳನ್ನು ಕಾಂಪೌಂಡ್ ಮೇಲೆ ಬಿಡಿಸುವಂತೆ ಪಿಡಿಒಗೆ ಸೂಚಿಸಿದರು. ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳಿಗೆ ಚೆನ್ನಾಗಿ ಓದುವಂತೆ ಸಲಹೆ ನೀಡಿದ ಅವರು ಸಿಇಒ, ಗುಣಮಟ್ಟದ ಶಿಕ್ಷಣ ಶಿಕ್ಷಕರಿಗೆ ತಿಳಿಸಿದರು.

ಮಾಣಿಕ್ಯಹಳ್ಳಿ ಗ್ರಾಮ ಪಂಚಾಯಿತಿಯ ಬೆಳ್ಳಾಳೆ ಪ್ರೌಢಶಾಲೆಗೆ ಭೇಟಿ ನೀಡಿ ಹೊಸದಾಗಿ ನಿರ್ಮಾಣಗೊಂಡಿರುವ ಶೌಚಗೃಹ ಕಾಮಗಾರಿ ಪರಿಶೀಲಿಸಿ ಉತ್ತಮವಾಗಿ ನಿರ್ವಹಣೆ ಮಾಡುವಂತೆ ತಿಳಿಸಿದರು. ಅಂತೆಯೇ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಮೇಲುಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.