RAICHUR 
ಜಿಲ್ಲೆ

ಪರೀಕ್ಷೆ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ, ಪರಿಶೀಲನೆ

Raichur - Reporter - Rachhai Swamy

ರಾಯಚೂರು ನಗರದ ಟ್ಯಾಗೋರï ಮೆಮೋರಿಯಲï ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಅವರು ಮಂಗಳವಾರ ಭೇಟಿ ನೀಡಿ, ಹಾಜರಾದ ವಿದ್ಯಾರ್ಥಿಗಳ ಮಾಹಿತಿ ಪಡೆದರು.

ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ತರಗತಿವಾರು ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಽಕಾರಿಗಳಿಗೆ ಸೂಚನೆ ನೀಡಿದರು. ವೆಬ್‌ಕಾಸ್ಟಿಂಗ್ ಕೊಠಡಿಗೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ನಂತರ ರಾಯಚೂರು ಗ್ರಾಮೀಣ ಪ್ರದೇಶದ ಮಲಿಯಬಾದï ಹಾಗೂ ಯರಗೇರಾ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲಿಸಿ ಪರೀಕ್ಷೆ ನಡೆಯುವ ಎ¯್ಲÁ ಕೊಠಡಿಗಳಿಗೂ ಸಿಸಿ ಕ್ಯಾಮೆರಾದ ವ್ಯವಸ್ಥೆ ಕಲ್ಪಿಸಿರುವುದನ್ನು ಪರಿಶೀಲಿಸಿದರು.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷಿಯಿಂದ ಬಾಯಾರಿಕೆ ಹಾಗೂ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಓಆರ್‌ಎಸ್ ಸೇರಿದಂತೆ ಇನ್ನೀತರ ಅಗತ್ಯ ಸೌಲಭ್ಯ ಒದಗಿಸಿರುವುದಕ್ಕೆ ಸಿಇಓ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.