ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಮಾ. 31ರೊಳಗೆ ಪೂರ್ಣ ಬಳಕೆಯಾಗಬೇಕು. ಲ್ಯಾಪ್ಸ್ ಆದರೆ ಸಂಬ0ಧಿಸಿದ ಇಲಾಖೆ ಅಽಕಾರಿಯನ್ನು ಜವಾಬ್ದಾರರನ್ನಾಗಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 3ನೇ ತ್ರೆÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದಿನ ಸಭೆಯಲ್ಲಿ ನೀಡಿದ್ದ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳು ತೃಪ್ತಿಕರವಾಗಿಲ್ಲ. ಕೆಲ ಇಲಾಖೆಗಳು ಅನುದಾನ ಬಳಕೆಯಲ್ಲಿ ಹಿಂದುಳಿದಿವೆ. ಕಾರಣ ಹೇಳದೆ ಅನುಮೋದಿತ ಕ್ರಿಯಾಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದರು.
* ಕಚೇರಿಯಲ್ಲಿ ಕಾಲ ಕಳೆಯಬೇಡಿ: ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಽಕಾರಿಗಳು ಕಚೇರಿಯಲ್ಲಿ ಕಾಲ ಕಳೆಯದೆ ಕ್ಷೇತ್ರ ಭೇಟಿ ಮಾಡಬೇಕು. ಕಾಮಗಾರಿ ಸ್ಥಳಗಳು, ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ದಿನನಿತ್ಯ ನಿರ್ವಹಿಸುವ ಕಚೇರಿ ಕಾರ್ಯಗಳ ಕುರಿತು ಡೈರಿ ಬರೆಯಬೇಕು. ಮುಂದಿನ ಕೆಡಿಪಿ ಸಭೆಗೆ ಡೈರಿಯೊಂದಿಗೆ ಬರಬೇಕು ಎಂದು ಸಚಿವ ಲಾಡ್ ಸೂಚಿಸಿದರು.
* ಶೂನ್ಯ ಸಾಧನೆ ಮಾಡುವ ಶಿಕ್ಷಕರಿಗೆ ಸನ್ಮಾನ:
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1 ಅನುದಾನಿತ ಹಾಗೂ 2 ಅನುದಾನ ರಹಿತ ಶಾಲೆಗಳ ಒಬ್ಬ ವಿದ್ಯಾರ್ಥಿಯೂ ಪಾಸಾಗಿಲ್ಲ. ಈ ವರ್ಷ ಶೂನ್ಯ ಸಾಧನೆ ಮಾಡುವ ಶಾಲೆಗಳ ಶಿಕ್ಷಕರನ್ನು ಜಿಲ್ಲಾ ಮಟ್ಟದಲ್ಲಿ, ರಾಷ್ಟ್ರೀಯ ಹಬ್ಬಗಳಲ್ಲಿ ಸನ್ಮಾನ ಮಾಡಲಾಗುವುದು. ಜತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಶಾಲೆ ಬಿಟ್ಟ ಮಕ್ಕಳ ಮಾಹಿತಿ ಸಂಗ್ರಹಿಸಬೇಕು. ಕಾರಣ ತಿಳಿದು ಮುಂದಿನ ಶಿಕ್ಷಣಕ್ಕೆ ಸಹಾಯ ಮಾಡಬೇಕು. ಕೌಶಲ್ಯಾಧಾರಿತ ತರಬೇತಿ ನೀಡಬೇಕು ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಮುಂಬರುವ ಬಜೆಟ್‌ನಲ್ಲಿ ಜಿಲ್ಲೆಗೆ ಆದ್ಯತೆ ಸಿಗುವಂತೆ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬ0ಧಿಸಿದ ಪ್ರಸ್ತಾವನೆಗಳನ್ನು ಜಿಲ್ಲಾಽಕಾರಿ ಮೂಲಕ ಸಲ್ಲಿಸಬೇಕು ಎಂದರು.
ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ನಷ್ಟವಾಗಿದ್ದರೂ ಅಽಕಾರಿಗಳು ಗಮನಿಸಿಲ್ಲ. ಉತ್ತಮ ಬೆಳೆ ಇರುವ ಕೆಲವೆಡೆ ಆಣೆವಾರಿ ಮಾಡಿ ಇಳುವರಿ ದಾಖಲಿಸುತ್ತಾರೆ. ಇದರಿಂದ ಶೇ. 90ರಷ್ಟು ರೈತರಿಗೆ ಹಾನಿಯಾಗುತ್ತದೆ. ಪ್ರತಿ ಶಾಸಕರಿಗೆ ಅವರ ಕ್ಷೇತ್ರದ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅಽಕಾರಿಗಳು ಮಾಹಿತಿ ನೀಡಬೇಕು ಎಂದರು.
ಜಿಲ್ಲಾಽಕಾರಿ ದಿವ್ಯ ಪ್ರಭು, ಜಿ.ಪಂ. ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ ವೇದಿಕೆಯಲ್ಲಿದ್ದರು.
ಕೆಡಿಪಿ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.