ಚಾಮರಾಜನಗರ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26ನೇ ಸಾಲಿನ 14 ರಿಂದ 17ರ ವಯೋಮಿತಿಯ ಮೈಸೂರು ವಿಭಾಗ ಮಟ್ಟದ ಬಾಲಕ ಹಾಗೂ ಬಾಲಕಿಯರ ಖೋ-ಖೋ ಪಂದ್ಯಾವಳಿಯು ಅ.12 ಹಾಗೂ 13ರಂದು ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.