ಜಿಲ್ಲೆ

ಅ. 23ರಿಂದ ಭತ್ತ, ರಾಗಿ ಖರೀದಿ ನೊಂದಣಿ ಆರಂಭ

ಚಾಮರಾಜನಗರ: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿಗೆ ಆದೇಶವಾಗಿದ್ದು, ಅ. 23ರಿಂದ ಜಿಲ್ಲೆಯ ವಿವಿಧೆಡೆ ತಾತ್ಕಾಲಿಕವಾಗಿ ನೊಂದಣಿ ಕೇಂದ್ರಗಳ ಆರಂಭವಾಗಲಿವೆ.

ಚಾಮರಾಜನಗರ, ಸಂತೇಮರಹಳ್ಳಿ, ಕೊಳ್ಳೇಗಾಲದ ಎ.ಪಿ.ಎಂ.ಸಿ ಯಾರ್ಡ್ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಭತ್ತ, ರಾಗಿ ಹಾಗೂ ಹನೂರಿನ ಎ.ಪಿ.ಎಂ.ಸಿ ಯಾರ್ಡ್ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದ್ದು, ನೊಂದಣಿ ಮಾಡಿಕೊಳ್ಳಲಾಗುತ್ತದೆ.

ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 2,369 ರೂ., ಗ್ರೇಡ್ ಎ ಭತ್ತಕ್ಕೆ 2,389 ರೂ. ರಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 50 ಕ್ವಿಂಟಾಲ್ ಭತ್ತ ಖರಿದಿಸಲಾಗುತ್ತದೆ. ರಾಗಿ ಪ್ರತಿ ಕ್ವಿಂಟಾಲ್ ಗೆ 4886 ರೂ., ರಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಟ 50 ಕ್ವಿಂಟಾಲ್ ವರೆಗೆ ರಾಗಿ ಖರೀದಿಸಲಾಗುತ್ತದೆ.

ಚಾಮರಾಜನಗರ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.