ಚಾಮರಾಜನಗರ: ಸಂಸದ ಸುನೀಲ್‌ಬೋಸ್ ಅಧ್ಯಕ್ಷತೆಯಲ್ಲಿ ಅ.27ರಂದು ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಸಭೆ ಶುರುವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.