ಚಾಮರಾಜನಗರ: ಜಿಲ್ಲಾಮಟ್ಟದ ಕನಕದಾಸ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯನ್ನು ಅ.28ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಮಾಜದ ಅಧ್ಯಕ್ಷರು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರು ಸಭೆಗೆ ಹಾಜರಾಗಿ ಕನಕದಾಸ ಜಯಂತಿ ಆಚರಣೆ ಕುರಿತು ಸಲಹೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.