ಜಿಲ್ಲೆ

ಅ. 28ರಂದು ಜಾಗೃತಿ ಕಾರ್ಯಗಾರ

ಚಾಮರಾಜನಗರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಇನ್‌ಕ್ಯೂಬೇಷನ್ ಅವರ್‌ನೆಸ್ ವರ್ಕ್‌ಶಾಪ್ ವಿಷಯ ಕುರಿತ ಕಾರ್ಯಗಾರವನ್ನು ಅ.28ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸದರಿ ವಿಷಯವು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಾಗೂ ನವ ಉದ್ಯಮ ಸ್ಥಾಪಿಸಲು ಇಚ್ಚಿಸುವವರಿಗೆ ಉಪಯುಕ್ತವಾಗಿದೆ. ಆಸಕ್ತರು ಈ ಕಾರ್ಯಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ (ಕೊಠಡಿ ಸಂಖ್ಯೆ 323, 324) ದೂ.ಸಂ 08226-224915,224916 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.