ಹಾಸನ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28ರಂದು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲಿ ಶುಕ್ರವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರ ಕಚೇರಿ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ವಿವಿಧ ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಚಾಲನೆ ನೀಡಲಾಗುವುದು ಎಂದರು.
ನಂತರ ನಗರದ ಕಲಾಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರನ್ನು ಸನ್ಮಾನ ಮಾಡುವುದರ ಜೊತೆಗೆ ಎಸ್.ಎಸ್. ಎಲ್. ಸಿ ಹಾಗೂ ಪಿ.ಯು.ಸಿಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲು ತಿಳಿಸಿದರು.
ಶ್ರೀ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ದೊರಕುವ ಸರ್ಕಾರಿ ಸವಲತ್ತುಗಳ ಬಗ್ಗೆ ಕಾರ್ಯಕ್ರಮದಲ್ಲಿ ಪಿ.ಪಿ.ಟಿ ಮೂಲಕ ಜನರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಟಿ. ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಮೇಗೌಡ ಹಾಗೂ ಸಮುದಾಯದ ವಿವಿಧ ಮುಖಂಡರು ಸಭೆಯಲ್ಲಿ ಹಾಜರಿದ್ದರು.