ಜಿಲ್ಲೆ

ಅ.30 ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ

ಚಾಮರಾಜನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಯಳಂದೂರಿನ ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗ, ಐ.ಕ್ಯೂ.ಎ.ಸಿ. ಇವರ ಸಹಯೋಗದೊಂದಿಗೆ ಚಕೋರ ಸಾಹಿತ್ಯ ವಿಚಾರ ವೇದಿಕೆಯಡಿ ಗಾಂಧಿ ಮತ್ತು ಪರಿಸರದ ಸವಾಲುಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅ.30ರಂದು ಬೆಳಗ್ಗೆ 10.30 ಗಂಟೆಗೆ ಯಳಂದೂರಿನ ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ದೀನಬಂಧು ಸಂಸ್ಥೆಯ ಮುಖ್ಯಸ್ಥ ಪ್ರೊ.ಜಿ.ಎಸ್.ಜಯದೇವ ಅವರು ಗಾಂಧಿ ಮತ್ತು ಪರಿಸರದ ಸವಾಲುಗಳು ಕುರಿತ ವಿಶೇಷ ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಂಶುಪಾಲ ವಿಜಯ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು. ಚಾಮರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಎ.ಎಂ.ಶಿವಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಐ.ಕ್ಯೂ.ಎ.ಸಿ ಕೋ ಆರ್ಡಿನೇಟರ್ ಮನೋಜ್ ಕುಮಾರ್, ಎಂ.ಜಿ.ಮುರಳಿ, ಹಿರಿಯ ಗ್ರಂಥ ಪಾಲಕ ಎಚ್.ಎ.ಅರುಣ್ ಗೌರವ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.