ಜಿಲ್ಲೆ

ಅ. 30ರಂದು ಪುರಾತನ ತಾಣಗಳ ವಸ್ತು ಪ್ರದರ್ಶನ

ಚಾಮರಾಜನಗರ: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐ.ಕ್ಯೂ.ಎ.ಸಿ ಸಹಯೋಗದಲ್ಲಿ ಕರ್ನಾಟಕದ ಪ್ರಮುಖ ಐತಿಹಾಸಿಕ ಕೋಟೆಗಳು ಹಾಗೂ ಏಳು ಅದ್ಭುತ ಪುರಾತನ ತಾಣಗಳ ಮಾದರಿಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಅ.30ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ಡಿ.ಎಸ್.ಪ್ರತಿಮಾ ಗೌರವ ಉಪಸ್ಥಿತಿ ವಹಿಸುವರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಸ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸುವರು.

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಬಿ.ಆರ್.ಜಯಣ್ಣ, ಐ.ಕ್ಯು.ಎ.ಸಿ ಸಂಚಾಲಕ ಡಾ.ಲಿಖಿತ ಎಸ್.ಅನುರಾಧ, ಇತಿಹಾಸ ವಿಭಾಗದ ಉಪನ್ಯಾಸಕ ಎಂ.ರೋಹಿತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಚೇರಿಯ ವಿಶೇಷ ಅಧಿಕಾರಿ ಡಾ.ಎನ್.ಜಿ.ಪ್ರಕಾಶ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.