ಚಾಮರಾಜನಗರ: ಹಿಂದುಳಿದ ವರ್ಗಗಳ ಸಮುದಾಯಗಳನ್ನು ಬಲಪಡಿಸುವ ಉದ್ದೇಶದಿಂದ ಅ.31 ರಂದು ವಾಯ್ಸ್ ಆಫ್ ಒಬಿಸಿ-100 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಚೇತನ್ ಕುಮಾರ್ ತಿಳಿಸಿದರು.
ಯಳಂದೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮ ಶಾಸಕ ಎ.ಆರ್.ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆಯಲಿದೆ. ಮಾಜಿ ಉಪಸಭಾಪತಿ ವಿ.ಆರ್.ಸುದರ್ಶನ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಒಬಿಸಿ ವರ್ಗಗಳ ರಾಜ್ಯ ಉಸ್ತುವಾರಿ ನಿಶ್ಚಿತ್, ರಾಜ್ಯ ಉಪಾಧ್ಯಕ್ಷ ವಿನೋರಾಜ್ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಒಬಿಸಿ ರಾಜ್ಯ ಉಪಾಧ್ಯಕ್ಷ ಸಿ.ಎ.ಮಹದೇವಶೆಟ್ಟಿ ಮಾತನಾಡಿ, ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಾನಮಾನಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅನುಕೂಲವಾಗಲಿದೆ. ಮೊದಲ ಹಂತದಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಸದರು, ಶಾಸಕರನ್ನು ಒಳಗೊಂಡಂತೆ ಕಾರ್ಯಕ್ರಮ ನಡೆಸಲಾಗುತ್ತದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಒಬಿಸಿ ಬ್ಲಾಕ್ ಅಧ್ಯಕ್ಷ ರಮೇಶ್ ಹೆಗ್ಗೋಠಾರ, ಒಬಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಉಪ್ಪಾರ್, ಕುಮಾರ್ ಹಾಜರಿದ್ದರು.