ಜಿಲ್ಲೆ

ಅ. 31ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಚಾಮರಾಜನಗರ: ಚಾ.ನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ಅ.31 ರಂದು ಬೆಳಗ್ಗೆ 10 ಗಂಟೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಸದಸ್ಯರ ಸಭೆ ಕರೆಯಲಾಗಿದೆ.

ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಅಧ್ಯಕ್ಷರ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಬಹುದು. ಮಧ್ಯಾಹ್ನ 1.30 ಗಂಟೆಗೆ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ನಾಮಪತ್ರ ವಾಪಸ್ಸು ಪಡೆಯಬಹುದಾಗಿದೆ.

ಅವಕಾಶವಿದ್ದಲ್ಲಿ ಮಧ್ಯಾಹ್ನ 2.15 ಗಂಟೆಗೆ ಚುನಾವಣೆ ನಡೆಯಲಿದೆ ಎಂದು ತಹಶೀಲ್ದಾರ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣಾ ಅಧಿಕಾರಿ ಗಿರಿಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.