ಜಿಲ್ಲೆ

ಅ.6ರಂದು ಚಿತ್ರದುರ್ಗ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.6ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆ ಳಗ್ಗೆ 11ಕ್ಕೆ ನಗರದ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ನಂತರ ಅವರು ಕಲುಷಿತ ನೀರು ಸೇವನೆಯ ಹಿನ್ನೆಲೆಯಲ್ಲಿ ಸಾವು-ನೋವು ಸಂಭವಿಸಿರುವ ಕವಾಡಿಗರಹಟ್ಟಿಗೆ ಭೇಟಿ ನೀಡಿದ ಬಳಿಕ ಖಾಸಗಿ ಕಾರ‌್ಯಕ್ರಮ ವೊಂದರಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ 11.30ಕ್ಕೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12. 10ಕ್ಕೆ ಅವರು ಹಿರಿಯೂರು ತಾಲೂಕು ಬಬ್ಬೂರು ಫಾರಂಗೆ ತೆರಳಿ ಅಲ್ಲಿ,ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾ ನೋತ್ಸವ ಸಮಾರಂಭ ದಲ್ಲಿ ಅವರು ಭಾಗವಹಿಸಲಿದ್ದಾರೆ.ಮಧ್ಯಾಹ್ನ 2.40ಕ್ಕೆ ಹಿರಿಯೂರಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಏರ್ಪಡಿಸಿರುವ ಕನಕ ಸಮು ದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಮಧ್ಯಾಹ್ನ 3.10ಕ್ಕೆ ಹಿರಿಯೂರಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿ ಸಲಿದ್ದಾರೆ.
ಕವಾಡಿಗರಹಟ್ಟಿಗೆ ಭೇಟಿ
ಸಿಎಂ ಸಿದ್ದರಾಮಯ್ಯ ಅವರು ಅ.6ರಂದು ಬೆಳಗ್ಗೆ ಚಿತ್ರದುರ್ಗದ ಕವಾಡಿಗರಹಟ್ಟಿಗೆ ಭೇಟಿ ನೀಡಲಿದ್ದಾರೆಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಿದ್ದರಾಮಯ್ಯ ಅವರು,ಸಂಕಷ್ಟಕ್ಕೆ ಸಿಲುಕಿರುವ ಕವಾಡಿಗರಹಟ್ಟಿಯ ನೊಂದ ಜನರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಅವರು ನಗರದಲ್ಲಿ ನಡೆಯಲಿರುವ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿನಯ್‌ಗೋಡೆಮನೆ ಅವರ ವಿವಾಹ ಕಾರ‌್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಆಂಜನೇಯ ತಿಳಿಸಿದ್ದಾರೆ.-----