ಗುರುಸ್ವಾಮಿ ಗಣಾಚಾರಿ 
ಜಿಲ್ಲೆ

ಅ.೨೭ ರಂದು ಸಾಹಿತಿ ಗುರುಸ್ವಾಮಿ ಗಣಾಚಾರಿ ಅಭಿನಂದನ ಸಮಾರಂಭ

ಬಾಗಲಕೋಟೆ: ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ, ರಾಜ್ಯ ಮತ್ತು ರಾಷ್ಟ್ರಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತಾಲೂಕಿನ ಮುಚಖಂಡಿ ಗ್ರಾಮದ ಗುರುಸ್ವಾಮಿ ಗಣಾಚಾರಿ ಅವರ ಸಹಸ್ರ ಚಂದ್ರದರ್ಶನ ಮತ್ತು ಅಭಿನಂದನ ಸಮಾರಂಭವನ್ನು ಅ.೨೭ ರಂದು ಬೆಳಗ್ಗೆ ೧೦.೨೫ಕ್ಕೆ ಗ್ರಾಮದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಚರಂತಿಮಠದ ಪ್ರಭುಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಿವಿವಿ ಸಂಘದ ವೀರಣ್ಣ ಚರಂತಿಮಠ ಉದ್ಘಾಟಿಸಲಿದ್ದಾರೆ. ಗುರುಪಥ ಅಭಿನಂದನ ಗ್ರಂಥ ಬೆಳಗಾವಿಯ ಹಿರಿಯ ಲೇಖಕಿ ಡಾ.ಗುರುದೇವಿ ಹುಲ್ಲೆಪ್ಪನವರಮಠ ಲೋಕಾರ್ಪಣೆ ಮಾಡಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಸಿದ್ಧರಾಮ ಮನಹಳ್ಳಿ ಉಪನ್ಯಾಸ ನೀಡಲಿದ್ದಾರೆ. ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.