ಜಿಲ್ಲೆ

ಅ.೪ ರಿಂದ ಪಂಚಾಯಿತಿ ಸೇವೆ ಬಂದ್

ಬಾಗಲಕೋಟೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಽಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅ.೪ ರಂದು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆ ಬಂದ್ ಮಾಡಿ ಹೋರಾಟ ಆರಂಭಿಸಲಾಗುವುದು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಜು ವಾರದ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಅ.೪ ರಂದು ಅನಿಽðಷ್ಟಾವಽ ಹೋರಾಟದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಅಂದಾಜು ೨ ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸರ್ಕಾರ ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡುವುದು, ಜಿಲ್ಲೆಯಲ್ಲಿ ಸ್ವಹಿಚ್ಛೆ ಇಲ್ಲದೆ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಠಿ ತೋರದೆ ವರ್ಗಾವಣೆ ಮಾಡಬಾರದು. ರಾಜ್ಯದ ಎಲ್ಲಾ ಪಂಚಾಯಿತಿ ಅಭಿವೃದ್ಧ್ದಿ ಅಽಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನ ತೀಕರಿಸುವುದು. ಗ್ರಾಪಂ ನಲ್ಲಿ ಅಗತ್ಯವಿರುವ ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ಹೇಳಿದರು.

ಎಂ.ಜೆ.ಎನ್.ಆರ್.ಇ.ಜಿ.ಎ. ಯೋಜನೆಯ ಅನುಷ್ಠಾನ ಪಡಿಸುವ ಬಗ್ಗೆ ಗುರಿ ನಿಗದಿಯನ್ನು ಕೈ ಬಿಡುವುದು. ಅವಶ್ಯಕತೆ ಇಲ್ಲದ ಕಡೆಗಳಲ್ಲಿ ಗ್ರಾಪಂ ಅಭಿಪ್ರಾಯ ಪಡೆದು ಕೂಸಿನ ಮನೆ ಮುಂದು ವರಿಸುವ ಬಗ್ಗೆ ಕ್ರಮ ಕೈಗೊಳ್ಳುವುದು. ಪಂಚಾಯತ ಅಭಿವೃದ್ಧಿ ಅಽಕಾರಿಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ರಾಜ್ಯದ ಶೇ.೬೮ ರಿಂದ ೭೦ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿಂದ ಶೇ.೭೦ ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾ ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಽಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಪಂ ಎಲ್ಲ ಸಿಬ್ಬಂದಿ ವರ್ಗ ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಎಲ್ಲ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳನ್ನು ಹಾಗೂ ಸಿಬ್ಬಂದಿ ಗಳನ್ನು ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸಿ ಈ ಹೋರಾಟ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಖಂಡರಾದ ಸದಾಶಿವ ಕಣಬೂರ, ಬಸವರಾಜ ಮುನವÀಳ್ಳಿ, ಗಂಗಾಧರ ಹನಮಸಾಗರ, ಎಸ್.ಪಿ. ಹಿರೇಮಠ, ಹಣಮಂತ ಕರ್ಣಕೋಟೆ ಮತ್ತಿತರರು ಉಪಸ್ಥಿತರಿದ್ದರು.